ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ 2023
2023 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :31-05-2023.
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು
ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿನೌಕರರಾಗಿರಬೇಕು.
• ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.ವಿದ್ಯಾರ್ಥಿಯು 2023ರ SSLC/ PUC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು
Online ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು
1.ವಿದ್ಯಾರ್ಥಿಯ ಪಾಸ್ಪೋರ್ಟ್ ಅಳತೆಯ ಭಾವಚಿತ್ರ
2.ದೃಢೀಕೃತ ಅಂಕಪಟ್ಟಿ
3. ಇಲಾಖೆಯ ಸೇವಾ ದೃಢೀಕರಣ ಪತ್ರ ಹಾಗೂ ಸಂಘದ ಜಿಲ್ಲಾ/ ತಾಲ್ಲೂಕು/ ಯೋಜನಾ ಶಾಖೆ ಅಧ್ಯಕ್ಷರು |ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರ
4.ಈ ಮೇಲ್ಕಂಡ ಲಗತ್ತುಗಳನ್ನು ನಿಗದಿತ JPG Format ನಲ್ಲಿ ( 1 MB ಮೀರದಂತೆ) ಅಪ್ಲೋಡ್ಮಾಡುವುದು
.5.ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್ಗೆ ಸ್ವೀಕೃತಿ ರವಾನೆಯಾಗಲಿದೆ
.6.ಶೇಕಡವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ.