2023 ನೇ ಸಾಲಿನಲ್ಲಿ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಅನುಮತಿ ನೀಡುವ ಬಗ್ಗೆ ಸ್ಪಷ್ಟೀಕರಣ

IMG 20231121 WA0016
IMG 20231121 WA0015
IMG 20231121 WA0014
WhatsApp Group Join Now
Telegram Group Join Now

ಶೈಕ್ಷ ಣಿಕ ಪ್ರವಾಸ ಅಗತ್ಯ ಮಾಹಿತಿಗಳು (Tour information)

ಪ್ರವಾಸದ ಪುರತ್ತುಗಳು

1. ಪ್ರತಿ ವರ್ಷ ಡಿಸೆಂಬರ್ ಮಾಹೆಯ ಅಂತ್ಯದೊಳಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಬೇಕು.ಯಾವುದೇ ಕಾರಣಕ್ಕೂ, ಡಿಸೆಂಬರ್ ಮಾಹೆಯ ನಂತರ ಶೈಕ್ಷಣಿಕ ಪ್ರವಾಸ ಕೈಗೊಳ್ಳದ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರಾಧಾನ್ಯತೆ ನೀಡುವುದು.

2 . ಪೋಷಕರ ಒಪ್ಪಿಗೆ ಪಡೆದ ವಿದ್ಯಾರ್ಥಿಗಳನ್ನು ಮಾತ್ರ ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯುವುದು.

3. ಪ್ರವಾಸ ಶೈಕ್ಷಣಿಕ ಪ್ರವಾಸವಾಗಿರಲು ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗುವ ಸ್ಥಳಗಳನ್ನುಪ್ರವಾಸಕ್ಕೆ ಆಯ್ಕೆ ಮಾಡಿಕೊಳ್ಳುವುದು.

4. ಪ್ರವಾಸ ಕೈಗೊಳ್ಳುವ ಖಾಸಗಿ ಶಾಲೆಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಕಡ್ಡಾಯವಾಗಿ ಶಾಲಾ ಮಾನ್ಯತೆಯನ್ನು ನವೀಕರಿಸಿರಬೇಕು

5. ಶೈಕ್ಷಣಿಕ ಪ್ರವಾಸವನ್ನು ಶಾಲಾ ದಿನಗಳಂದು ಕೈಗೊಂಡಲ್ಲಿ ಮುಂದಿನ ದಿನಗಳಲ್ಲಿ ಅಂದರೆ ಶನಿವಾರ ಪೂರ್ಣದಿನ/ಭಾನುವಾರ ಶಾಲೆ ನಡೆಸಿ ಕೊರತೆ ಬೀಳುವ ಪಠ್ಯ ಚಟುವಟಿಕೆಗಳನ್ನು ಸರಿದೂಗಿಸುವುದು.

6. ಇಲಾಖೆಯಿಂದ ಪ್ರವಾಸಕ್ಕೆ ಯಾವುದೇ ಸೌಲಭ್ಯವನ್ನು ನೀಡಲಾಗುವುದಿಲ್ಲ.

7. ಪ್ರವಾಸದ ಸಮಯದಲ್ಲಿ ಸಂಭವಿಸುವ ಯಾವುದೇ ಅವಘಡಗಳಿಗೆ ಶಾಲೆಯ ಮುಖ್ಯಸ್ಥರು ನೇರ ಹೊಣೆಗಾರರಾಗಿರುತ್ತಾರೆ ಇಲಾಖೆಯು ಜವಾಬ್ದಾರಿಯಾಗಿರುವುದಿಲ್ಲ.

8. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಥವಾ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖಾ ವಾಹನಗಳಲ್ಲೇ ಕಡ್ಡಾಯವಾಗಿ ಶೈಕ್ಷಣಿಕ ಪ್ರವಾಸವನ್ನು ಕೈಗೊಳ್ಳಬೇಕು

9. ಯಾವುದೇ ಕಾರಣಕ್ಕೂ ಅನಧೀಕೃತವಾಗಿ ಖಾಸಗಿ ಹಾಗೂ ಮಿನಿ ಬಸ್ಗಳಲ್ಲಿ ಪ್ರವಾಸವನ್ನು ಕೈಗೊಳ್ಳಬಾರದು.

10. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡುವುದು ಹಾಗೂ ಕೋವಿಡ್: 19 ಸಂಬಂಧಿಸಿದಂತೆ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

11. ಪ್ರವಾಸ ಕೈಗೊಂಡಿರುವ ವಿದ್ಯಾರ್ಥಿನಿಯರ ಮೇಲ್ವಿಚಾರಣೆಯನ್ನು ಪ್ರವಾಸಕ್ಕೆ ನಿಯೋಜಿತಮಹಿಳಾ ಶಿಕ್ಷಕರೇ ಕಡಾಯವಾಗಿ ನೋಡಿಕೊಳ್ಳತಕ್ಕದು,

ಈ ಮೇಲ್ಕಂಡ ಎಲ್ಲಾ ಪರತ್ತುಗಳನ್ನು ಪಾಲಿಸಿ, ಇಲಾಖಾ ಅನುಮತಿಯನ್ನು ತಪ್ಪದೇ ಪಡೆದಿರಬೇಕು ಹಾಗೂ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಮಾಹಿತಿಯನ್ನು ಇಲಾಖೆಗೆ ಕಡ್ಡಾಯವಾಗಿ ಅನುಮೋದನೆ ಪಡೆಯಬೇಕು

school tour orders and other files

ಪ್ರವಾಸ ಕೈಗೊಳ್ಳಲಾದ ಆದೇಶ

ಬೇರೆ ಬೇರೆ ಜಿಲ್ಲೆಗಳ ಮಾಹಿತಿಗಳು

ಶೈಕ್ಷಣಿಕ ಪ್ರವಾಸದ ಮಾರ್ಗಸೂಚಿ

WhatsApp Group Join Now
Telegram Group Join Now
Sharing Is Caring:

Leave a Comment