ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಪ್ರಸ್ತುತ ಮುಖ್ಯ ಕಾರ್ಯದರ್ಶಿಯಾಗಿರುವ ರಜನೀಶ್ ಗೋಯಲ್ ಅವರು ಜುಲೈ 31 ರಂದು ನಿವೃತ್ತಿಯಾಗುತ್ತಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ಅವರ ಪತ್ನಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ. 1989ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಶಾಲಿನಿ ರಜನೀಶ್ ಅವರು 2027ರ ಜೂನ್ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ.