SSLC ಪರೀಕ್ಷಾ ವೇಳಾಪಟ್ಟಿ ಪ್ರಕಟ

2020-21 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಸ್‌ಎಲ್ಸಿ ಪರೀಕ್ಷೆ ಜೂ.21 ರಿಂದ ಜು.5 ವರೆಗೂ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ್ ತಿಳಿಸಿರುತ್ತಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿತ್ತು. ಇದೀಗ ಜೂ.21ರಿಂದ ಅಧಿಕೃತವಾಗಿ ಪರೀಕ್ಷೆ ಆರಂಭಗೊಳ್ಳಲಿವೆ. ಪ್ರತಿಯೊಂದು ವಿಷಯದ ಪರೀಕ್ಷೆ ಮುಗಿದ ನಂತರ ಸೂಕ್ತ ಅಂತರವಿಟ್ಟು ಪರೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಜೂನ್ 21- ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ,

ಜೂ. 24 -ಗಣಿತ, ಜೂ. 28 -ವಿಜ್ಞಾನ, ಜೂ. 30-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಜು. 2 – ದ್ವಿತೀಯ ಭಾಷೆ ಇಂಗ್ಲಿಷ್/ ಕನ್ನಡ, ಜು.5 – ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದರು.

IMG 20210301 WA0014 min
ಎಸೆಸೆಲ್ಸಿ ವೇಳಾಪಟ್ಟಿ

ಹೆಚ್ಚಿನ ಮಾಹತಿ ಕೆಳಗೆ ನೀಡಲಾಗಿದೆ.

Sharing Is Caring:

Leave a Comment