ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ವಿವಿಧ ಸೌಲಭ್ಯಗಳು

WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ವಿವಿಧ ಸೌಲಭ್ಯಗಳು:

  • ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಶೇ.100 ಫಲಿತಾಂಶ ಪಡೆದ 30 ಕ್ಕಿಂತ ಹೆಚ್ಚು ಮಕ್ಕಳು ಅಭ್ಯಾಸ ಮಾಡುತ್ತಿರುವಂತಹ ಸರಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳಿಗೆ ಹಾಗೂ ಸಂಯುಕ್ತ ಪದವಿ ಪೂರ್ವ ಕಾಲೇಜುಗಳಿಗೆ ಸ್ಮರಣ ಫಲಕ ಮತ್ತು ರೂ.10000/- ಪ್ರೋತ್ಸಾಹ ಧನ ನೀಡಲಾಗುತ್ತದೆ. ಅನುದಾನ ರಹಿತ ಶಾಲಾ ಕಾಲೇಜುಗಳಿಗೆ ಅಭಿನಂದನಾ ಫಲಕ ನೀಡಿ ಜಿಲ್ಲಾಮಟ್ಟದಲ್ಲಿ ಗೌರವಿಸಲಾಗುತ್ತದೆ.
  • ರಾಜ್ಯ ಮಟ್ಟದ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ (ಎನ್ ಟಿ ಎಸ್ ಇ) ಉತ್ತೀರ್ಣರಾಗಿ ರಾಷ್ಟಮಟ್ಟದಲ್ಲಿ ಆಯ್ಕೆಯಾಗದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯ ವತಿಯಿಂದ ವಾರ್ಷಿಕ ರೂ.2000/- ದಂತೆ ಎರಡು ವರ್ಷಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಇಂತಹ ವಿದ್ಯಾರ್ಥಿಗಳ ಪಟ್ಟಿಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ವತಿಯಿಂದ ಪಡೆಯಲಾಗುತ್ತದೆ.
  • ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಗೆ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ವಂತಿಗೆಯ ಶೇ. 50 ಭಾಗವನ್ನು ಆಯಾ ಶಾಲಾ ಕಾಲೇಜುಗಳಲ್ಲಿ ಉಳಿಸಿಕೊಂಡು ವಿದ್ಯಾರ್ಥಿಗಳ ವಿದ್ಯಾಭಿವೃದ್ಧಿ ಕಾರ್ಯಕ್ರಮಗಳಿಗೆ ಉಪಯೋಗಿಸಿಕೊಳ್ಳಲು ಸಂಬಂಧಿಸಿದ ಶಾಲಾ ಕಾಲೇಜುಗಳಿಗೆ ಅನುಮತಿ ನೀಡಲಾಗಿದೆ.
  • ಅಪಾಯದ ಸನ್ನಿವೇಶಗಳಲ್ಲಿ ಅಸಾಧಾರಣ ಧೈರ್ಯ, ಸಮಯ‌ ಪ್ರಜ್ಞೆ ಮತ್ತು ಸಾಹಸ ಪ್ರದರ್ಶಿಸಿ ಜನರ ಪ್ರಾಣ ಉಳಿಸಲು ನೆರವಾದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಶಿಫಾರಸ್ಸುಗೊಂಡ ವಿದ್ಯಾರ್ಥಿಗಳಿಗೆ ರೂ. 2500/- ಗಳ ನಗದು ಪುರಸ್ಕಾರ ಹಾಗೂ ಮೆಚ್ಚುಗೆ ಪತ್ರವನ್ನು ನೀಡಲಾಗುತ್ತದೆ.
  • ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾಗುವ ಶಾಲಾ ಕ್ರೀಡೆಗಳಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಮೂರು ಪ್ರಶಸ್ತಿಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕ್ರಮವಾಗಿ ರೂ.3000/- ರೂ.2500/- ರೂ.2000/- ಗಳನ್ನು ವೈಯಕ್ತಿಕ ಬಹುಮಾನವಾಗಿ ಹಾಗೂ ಪ್ರಥಮ ಮೂರು ಪ್ರಶಸ್ತಿಗಳನ್ನು ಗೆದ್ದ ತಂಡಗಳಿಗೆ ಕ್ರಮವಾಗಿ ರೂ.2000/- ರೂ.1500/- ರೂ.1000/- ನೀಡುವ ಮೂಲಕ ಪ್ರೋತ್ಸಾಹಿಸಲಾಗುತ್ತದೆ.

ವಿದ್ಯಾರ್ಥಿಗಳ ವೈದ್ಯಕೀಯ ವೆಚ್ಚ ಚಿಕಿತ್ಸೆಯ ಮರುಪಾವತಿಗೆ ಅರ್ಜಿ ಸಲ್ಲಿಸುವವರು ಗಮನಿಸಬೇಕಾದ ಅಂಶಗಳು

IMG 20211207 WA0005 min
WhatsApp Group Join Now
Telegram Group Join Now
Sharing Is Caring:

Leave a Comment