2024 -25 ನೇ ಶೈಕ್ಷಣಿಕ ಸಾಲಿನಲ್ಲಿ ಕೆಲವು ಹೆಚ್ಚುವರಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಮೂಲ ಶಾಲೆಗಳಿಂದ ಬೇರೆ ಶಾಲೆಗೆ ನಿಯೋಜನೆ ಮಾಡಲಾಗಿತ್ತು. ಆದರೆ ಕೆಲವು ಜಿಲ್ಲೆಗಳ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಯೋಜನೆ ಮೇಲಿರುವ ಶಿಕ್ಷಕರನ್ನು ಮಾರ್ಚ್ ಅಂತ್ಯಕ್ಕೆ ಕರ್ತವ್ಯದಿಂದ ಬಿಡುಗಡೆಗೊಳಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ಡಾ. ಕೆ.ವಿ. ತ್ರಿಲೋಕ್ ಚಂದ್ರ ನಿಯೋಜನೆ ಆದೇಶವನ್ನು ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.
” ಪ್ರಸ್ತುತ ಹೆಚ್ಚುವರೇ ಶಿಕ್ಷಕರ ಮರು ಹೊಂದಾಣಿಕೆ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಹೀಗಾಗಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಈ ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು ಅಲ್ಲದೇ ಬಿಡುಗಡೆಗೊಂಡ ಶಿಕ್ಷಕರು ತಕ್ಷಣವೇ ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು” ಎಂದು ಸೂಚಿಸಿದ್ದಾರೆ. ಒಂದು ವೇಳೆ ನಿಗದಿತ ಅವಧಿಯಲ್ಲಿ ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗದಿದ್ದರೆ ಅಂತಹ ಶಿಕ್ಷಕರನ್ನು ಅನಧಿಕೃತ ಗೈರು ಹಾಜರಿ ಪ್ರಕರಣ ಎಂದೂ ಪರಿಗಣಿಸಿ ಶಿಸ್ತು ಕ್ರಮ ಜರುಗಿಸಬೇಕು, ಮಾತ್ರವಲ್ಲದೆ ಕರ್ತವ್ಯಕ್ಕೆ ಹಾಜರಾಗದ ಶಿಕ್ಷಕರ ವೇತನ ತಡೆಹಿಡಿಯಬೇಕು. ತಪ್ಪಿದ್ದಲ್ಲಿ ಸಂಬಂಧಪಟ್ಟ ವೇತನ ಬಡಾವಣೆ ಅಧಿಕಾರಿಗಳು ನೇರ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಇನ್ನು ನಿಯೋಜನೆ ಮೇಲೆ ಇರುವ ಶಿಕ್ಷಕರನ್ನು ಬಿಡುಗಡೆಗೊಳಿಸಿರುವ ಹಾಗೂ ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾದ ಶಿಕ್ಷಕರ ಜಿಲ್ಲಾ ಅವರು ಪಟ್ಟಿಯನ್ನು ಏಪ್ರಿಲ್ 17ರ ಒಳಗಾಗಿ ಆಯುಕ್ತರ ಕಚೇರಿಗೆ ಸಲ್ಲಿಸಬೇಕು. ಇಲ್ಲದಿದ್ದರೆ ಅದಕ್ಕೆ ಸಂಬಂಧಪಟ್ಟ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಸಂಬಂಧಿತ ಸಿಬ್ಬಂದಿಗಳ ವಿರುದ್ಧ ಕರ್ತವ್ಯ ನಿರ್ಲಕ್ಷ ಎಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶ ನೀಡಿದ್ದಾರೆ.
ಪ್ರಾಥಮಿಕ ಪ್ರೌಢಶಾಲಾ ಶಿಕ್ಷಕರ ನಿಯೋಜನೆ ಆದೇಶ ರದ್ದು
By kspstadk.com
Published On:
