ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಅನುಮತಿಯಿಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ / ವಿಡಿಯೋ ಮಾಡದಂತೆ ನಿಷೇಧಿಸಿ ಆದೇಶಿಸಿದೆ

ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ನೌಕರರ ಸಂಘ, ಕಬ್ಬನ್
ಉದ್ಯಾನವನ, ಬೆಂಗಳೂರು ಇವರು ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲ್ಲೂಕು ಹಾಗೂ ರಾಜ
ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ
ಕಚೇರಿಗಳಿಗೆ ಸಾರ್ವಜನಿಕರು ಅವರ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವುದು
ಸರ್ವೇಸಾಮಾನ್ಯವಾಗಿದ್ದು, ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ
ಬಂದು ಕಚೇರಿಯ ಫೋಟೋ/ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ
ಹಾಗೂ ಇಂತಹ ಫೋಟೋ/ವಿಡಿಯೋಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಇಲಾಖೆ,
ಸರ್ಕಾರದ ಘನತೆಗೆ ಕುಂದುಂಟಾಗುತ್ತಿರುವುದು ಹಾಗೂ ಅದರಲ್ಲೂ ವಿಶೇಷವಾಗಿ ಮಹಿಳಾ
ನೌಕರರಿಗೆ ಸಮಸ್ಯೆ ಉಂಟಾಗುತ್ತಿರುವುದರಿಂದ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ
ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ / ವಿಡಿಯೋ ಮಾಡದಂತೆ
ನಿಷೇಧಿಸುವ/ನಿರ್ಬಂಧಿಸುವ ಕುರಿತು ಮನವಿ ಮಾಡಿರುತ್ತಾರೆ.

ಈ ಕುರಿತು ಸರ್ಕಾರವು ಕೂಲಂಕುಷವಾಗಿ ಗಮನಹರಿಸಿದ್ದು, ರಾಜ್ಯ ಸರ್ಕಾರದ ಎಲ್ಲಾ
ಇಲಾಖೆಗಳ ಕಚೇರಿ ವೇಳೆಯಲ್ಲಿ ಸಾರ್ವಜನಿಕರು ಅನಧಿಕೃತವಾಗಿ ಫೋಟೋ / ವಿಡಿಯೋ
ನಿರ್ಬಂಧಿಸುವುದು ಅವಶ್ಯಕವಾಗಿರುತ್ತದೆಂದು ಅಭಿಪ್ರಾಯಪಟ್ಟಿರುತ್ತದೆ.
ಅದರಂತೆ, ಈ ಕೆಳಕಂಡ ಆದೇಶ.

ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ(ಆಸು) 40 ಕತವ 2022 ಬೆಂಗಳೂರು, ದಿನಾಂಕ: 15-07-2022

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಎಲ್ಲಾ
ಇಲಾಖೆಗಳ ಕಚೇರಿ ವೇಳೆಯಲ್ಲಿ ಅನುಮತಿಯಿಲ್ಲದೆ ಸಾರ್ವಜನಿಕರು ಅನಧಿಕೃತವಾಗಿ
ಫೋಟೋ/ವಿಡಿಯೋ ಮಾಡದಂತೆ ನಿಷೇಧಿಸಿ ಆದೇಶಿಸಲಾಗಿದೆ.

Sharing Is Caring:

Leave a Comment